ಕ್ರೈಂ

ನೇಹಾ ಹಿರೇಮಠ ಹತ್ಯೆ ಪ್ರಕರಣ ಎಸ್ ಐಟಿಯಿಂದ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ

ಕರ್ನಾಕಟ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹಾಡಹಗಲೇ ಕಾಲೇಜು ಕ್ಯಾಂಪಸ್ ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜ ಘಾತುಕ ಶಕ್ತಿಗಳಿಗೆ ಪೊಲಿಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಅವರು ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ …

ನೇಹಾ ಹಿರೇಮಠ ಹತ್ಯೆ ಪ್ರಕರಣ ಎಸ್ ಐಟಿಯಿಂದ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ Read More »

ಆನ್​ಲೈನ್ ಬ್ಲ್ಯಾಕ್​ಮೇಲ್ : 14.57 ಲಕ್ಷ  ಕಳೆದುಕೊಂಡ ಮಹಿಳೆ

  ಕಸ್ಟಮ್ಸ್​​ ಅಧಿಕಾರಿಗಳ ಸೋಗಿನಲ್ಲಿ ಆನ್​ಲೈನ್ ವಂಚಕರು ಮಾಡಿದ ಕುತಂತ್ರಕ್ಕೆ ಬಲಿಯಾಗಿ ಬೆಂಗಳೂರಿನ ಮಹಿಳೆಯೊಬ್ಬರು 14.57 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ವರದಿಯಾಗಿದೆ. ಕಸ್ಟಮ್ಸ್​​ ಅಧಿಕಾರಿಗಳ ಸೋಗಿನಲ್ಲಿ ವಂಚಕರು ವಿಡಿಯೋ ಕಾಲ್​ನಲ್ಲಿ ಮಹಿಳೆಯನ್ನು ವಿವಸ್ತ್ರಗೊಳ್ಳುವಂತೆ ಸೂಚಿಸಿದ್ದಲ್ಲದೆ, ಆ ವಿಡಿಯೋವನ್ನು ರೆಕಾರ್ಡ್​ ಮಾಡಿ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿದ್ದರು. ಪರಿಣಾಮವಾಗಿ, ನಗ್ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಬಹುದು ಎಂಬ ಭೀತಿಯಿಂದ ಮಹಿಳೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ದೂರಿನ ಪ್ರತಿಯನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಯಿಂದ ತಿಳಿದು …

ಆನ್​ಲೈನ್ ಬ್ಲ್ಯಾಕ್​ಮೇಲ್ : 14.57 ಲಕ್ಷ  ಕಳೆದುಕೊಂಡ ಮಹಿಳೆ Read More »

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ: ಮಗುವಿನ ಮೇಲೆ ಅಮಾನುಷ ಹಲ್ಲೆಗೈದ ತಾಯಿ ವಿರುದ್ಧ ಎಫ್ಐಆರ್

ಬೆಂಗಳೂರು: ಹೆತ್ತ ತಾಯಿಯೇ ತನ್ನ ಮೂರುವರೆ ವರ್ಷದ ಮಗನಿಗೆ ಅಮಾನುಷವಾಗಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸೂಚನೆ ಮೇರೆಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಹಲ್ಲೆಗೈದ ಶಾರಿನ್ ಎಂಬ ಮಹಿಳೆ ಮತ್ತು ಆಕೆಯ ಪ್ರಿಯಕರನ ವಿರುದ್ಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಹಲ್ಲೆಗೀಡಾದ ಮೂರುವರೆ ವರ್ಷದ ಸ್ಟಾಲಿನ್ ಎಂಬ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ. ಸದ್ಯ ಸರ್ಕಾರಿ …

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ: ಮಗುವಿನ ಮೇಲೆ ಅಮಾನುಷ ಹಲ್ಲೆಗೈದ ತಾಯಿ ವಿರುದ್ಧ ಎಫ್ಐಆರ್ Read More »

ಸ್ಫೋಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದುಷ್ಕರ್ಮಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಾ. 02: ನಿನ್ನೆಯ ಸ್ಫೋಟದ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ದುರ್ಘಟನೆಗೆ ಕಾರಣರಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಶನಿವಾರ ಹೇಳಿದ್ದಿಷ್ಟು; “ಪ್ರಕರಣದ ತನಿಖೆಗೆ 7-8 ತಂಡಗಳನ್ನು ನಿಯೋಜನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿರುವ ಸಿಸಿಟಿವಿ ಪರಿಶೀಲನೆ ಮಾಡಲಾಗುತ್ತಿದೆ. ದುಷ್ಕರ್ಮಿ ಹೇಗೆ ಬಂದ, ಯಾವ ರೀತಿ ಸ್ಫೋಟಕ ಇಟ್ಟು ಹೋದ ಎಂಬ ಬಗ್ಗೆ ವಿಡಿಯೋ …

ಸ್ಫೋಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದುಷ್ಕರ್ಮಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ Read More »

ರಾಮೇಶ್ವರ ಕಫೆ ಸ್ಪೋಟ ಪ್ರಕರಣ

ಆರೋಪಿ ಪತ್ತೆಗೆ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ: ಸಿ.ಎಂ.ಪ್ರಶ್ನೆ ಮೈಸೂರು, ಮಾರ್ಚ್ 07: ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು …

ರಾಮೇಶ್ವರ ಕಫೆ ಸ್ಪೋಟ ಪ್ರಕರಣ Read More »

ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಆತಂಕ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ತುಮಕೂರು (ಕುಣಿಗಲ್), ಮಾ. 01: “ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬೆಂಗಳೂರಿನ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಅವರು ಶಿವಕುಮಾರ್ ತಿಳಿಸಿದರು. ಕುಣಿಗಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಿಷ್ಟು; “ಈ ಸ್ಫೋಟವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ. ಇದು ವ್ಯಾಪಾರದ ವೈರಿಗಳೇ ಮಾಡಿದ್ದೇ ಅಥವಾ ಬೇರೆ ಉದ್ದೇಶದಿಂದ ಮಾಡಿದ್ದಾರೆಯೇ ಎಂದು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ರಾಮೇಶ್ವರಂ ಕೆಫೆ ಸುತ್ತಮುತ್ತಲ ಪ್ರದೇಶದ ಸಿಸಿಟಿವಿ …

ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಆತಂಕ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್ Read More »

ಸುಳ್ಳು ದೂರು ಕೊಟ್ಟಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಎಫ್ಐಆರ್..

ಬಿಗ್ ಬಾಸ್ ಮಾಜಿ ಸ್ಪರ್ಧಿ ಆಡಂ ಪಾಷಾ ವಿರುದ್ಧ ಎಫ್ಐಆರ್.. ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ಎಫ್ಐಆರ್ ದಾಖಲು. ವಾಟರ್ ಟ್ಯಾಂಕ್ ಲಾರಿ ಚಾಲಕನಿಂದ ಹಲ್ಲೆ ಆರೋಪ ಮಾಡಿ ದೂರು ನೀಡಿದ್ದ ಆ್ಯಡಂ ಪಾಷ.. ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ಘಟನೆ ನಡೆದಿರೋದಾಗಿ ದೂರು ಆ್ಯಡಂ ಪಾಷ ದೂರು ಹಿನ್ನಲೆ ತನಿಖೆ ನಡೆಸಿದ್ದ ಪೊಲೀಸ್ರು. ಎಫ್ ಐ ಆರ್ ದಾಖಲಿಸುವ ವೇಳೆ ರಾಂಗ್ ನಂಬರ್ ಕೊಟ್ಟಿರೋ ಆ್ಯಡಂಪಾಷ. ಈ ವೇಳೆ ಆ್ಯಡಂ ಪಾಷ ಸುಳ್ಳು …

ಸುಳ್ಳು ದೂರು ಕೊಟ್ಟಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಎಫ್ಐಆರ್.. Read More »

ಬೆಂಗಳೂರಿನಲ್ಲಿ ಮತ್ತೆ ಹುಸಿಬಾಂಬ್ ಬೆದರಿಕೆ..!

ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ.. ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ.. ಈ ಮೇಲ್ ಮಾಡಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ.. Sahukarisrinuvasarao65@gmail.com ನಿಂದ ಬಂದ ಬೆದರಿಕೆ.. ಸ್ಕೂಲ್ ಒಳಗೆ ಬಾಂಬ್ ಇಟ್ಟಿದಿವಿ ಬೆಳಗ್ಗೆ 10:20 ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಮೇಲ್ ಮಾಡಿದ್ದ ಅಪರಿಚಿತ.. ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ.. ಹುಸಿ ಬಾಂಬ್ ಬೆದರಿಕೆ ಹಿನ್ನಲೆ.. ದೂರು ದಾಖಲಿಸಿಕೊಂಡ ಪೊಲೀಸರು.. ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರಿಂದ ದೂರು ದಾಖಲು.. ಯಶವಂತಪುರ ಪೊಲೀಸ್ …

ಬೆಂಗಳೂರಿನಲ್ಲಿ ಮತ್ತೆ ಹುಸಿಬಾಂಬ್ ಬೆದರಿಕೆ..! Read More »

ರೌಡಿಶೀಟರ್ ಗಳ ಗ್ಯಾಂಗ್ ಕಟ್ಟಿಕೊಂಡು ಬಿಲ್ಡರ್ ಗಳ ಬಳಿ ವಸೂಲಿ ಮಾಡುತ್ತಿದ್ದ ನಕಲಿ RTI ಕಾರ್ಯಕರ್ತನ ಬಂಧನ..

ಸಿಸಿಬಿ ಒಸಿಡಬ್ಲೂ ಘಟಕದಿಂದ ಜೈಹಿಂದ್ ಸಂಘಟನೆ ಮುಖ್ಯಸ್ಥ ಎಂದು ಹೇಳಿಕೊಳ್ತಿದ್ದ ನಕಲಿ RTI ಕಾರ್ಯಕರ್ತ ರಾಘವ್ ಗೌಡ ಬಂಧನ.ರೌಡಿ ಪಟಾಲಂ ಮಾಡಿಕೊಂಡು ನಗರದ ಅನೇಕ ಬಿಲ್ಡರ್ ಗಳಿಗೆ ..ಬಿಲ್ಡಿಂಗ್ ಸರಿ ಇಲ್ಲ, ರೂಲ್ಸ್ ಪ್ರಕಾರ ಕಟ್ಟಿಲ್ಲ, ಇದನ್ನೆಲ್ಲ ಬಹಿರಂಗ ಮಾಡ್ತೀವಿ ಅಂತ ಬೆದರಿಸಿ ಹಣಕ್ಕೆ ಬೇಡಿಕೆ.ಅದೇ ರೀತಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಬಿಂದು ವೆಂಚರ್ಸ್ ಮಾಲೀಕರಿಗೆ ಬೆದರಿಸಿ 80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿ ಸಿಸಿಬಿಯಿಂದ ನಕಲಿ RTI ಕಾರ್ಯಕರ್ತ …

ರೌಡಿಶೀಟರ್ ಗಳ ಗ್ಯಾಂಗ್ ಕಟ್ಟಿಕೊಂಡು ಬಿಲ್ಡರ್ ಗಳ ಬಳಿ ವಸೂಲಿ ಮಾಡುತ್ತಿದ್ದ ನಕಲಿ RTI ಕಾರ್ಯಕರ್ತನ ಬಂಧನ.. Read More »

ಬೆಂಗಳೂರಿನಲ್ಲಿ 12ವರ್ಷದ ಬಾಲಕ ನಾಪತ್ತೆ. 21ನೇ ತಾರೀಖಿನಿಂದ ನಾಪತ್ತೆಯಾಗಿರೋ ಬಾಲಕ ಪ್ರಣವ್..

ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ.. 21ನೇ ತಾರೀಖು ಶಾಲೆಗೆ ಹೋಗಿದ್ದ ಪ್ರಣವ್ ಮಧ್ಯಾಹ್ನ 12:30ರ ನಂತರ ಮನೆಗೆ ಬಂದಿಲ್ಲ ಓಫಾರ್ಮ್ ಸಿಗ್ನಲ್‌ ಮೂಲಕ ನಾಪತ್ತೆಯಾಗಿರೋ ಬಾಲಕ..ಈ ಸಂಬಂಧ ವೈಟ್ ಫಿಲ್ಡ್ ಠಾಣೆಯಲ್ಲಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದ ಪೋಷಕರು..ಕೊನೆಯದಾಗಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಓಡಾಡಿರೋದು ಪತ್ತೆಯಾಗಿದ್ದು ಸಿಸಿಟಿವಿ ಪರಿಶೀಲನೆ ವೇಳೆ ಮೆಜೆಸ್ಟಿಕ್ ನಲ್ಲಿ ಹೋಗಿರೋ ಬಾಲಕ..ಕಳೆದ ಎರಡು ಮೂರು ದಿನಗಳಿಂದ ಪ್ರಣವ್ ಗಾಗಿ ಪೊಲೀಸರು, ತಂದೆ ತಾಯಿ ಹುಡುಕಾಟ.. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..